ಮಂಡ್ಯ, ಆ.22(Daijiworld News/SS): ಮೂರು ವರ್ಷದ ಪುಟ್ಟ ಮಗುವಿನ ಮೇಲೆ 16 ವರ್ಷದ ಬಾಲಕ ಅತ್ಯಾಚಾರ ಮಾಡಿರುವ ದುರ್ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವರಾಹಸಂದ್ರ ಗ್ರಾಮದ ಬಾಲಕ ಅತ್ಯಾಚಾರವೆಸಗಿ ಪರಾರಿಯಾಗಿರುವ ಆರೋಪಿ. ಈತ ಆಟವಾಡುತ್ತಿದ್ದ ಮಗುವನ್ನು ಮನೆಗೆ ಕರೆದೊಯ್ದು ದುಷ್ಕೃತ್ಯ ಎಸಗಿದ್ದಾನೆ. ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನು ಮನೆಯ ಪೋಷಕರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಬಾಲಕ ನಾಪತ್ತೆಯಾಗಿದ್ದಾನೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.