ಬೆಂಗಳೂರು, ಆ.24(Daijiworld News/SS): ಪ್ಲಾಸ್ಟಿಕ್ ನಿಷೇಧ ಮಾಡಲು ಕೇಂದ್ರ ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.
ದಕ್ಷಿಣ ಭಾರತದ ಅತಿ ದೊಡ್ಡ 10ನೇ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ವಸ್ತು ಪ್ರದರ್ಶನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಾಗೂ ಜನರ ಆರೋಗ್ಯದ ಮೇಲೆ ಪ್ಲಾಸ್ಟಿಕ್ ದುಷ್ಪರಿಣಾಮ ಬೀರುತ್ತಿದೆ. ಈ ಹಿನ್ನಲೆಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲು ಕೇಂದ್ರ ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಿದರು.
ಒಟ್ಟು ಪ್ಲಾಸ್ಟಿಕ್ ಬಳಕೆಯಲ್ಲಿ ಕೇವಲ ಶೇಕಡ 5ರಷ್ಟಿರುವ ಒಮ್ಮೆ ಮಾತ್ರ ಬಳಸುವ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಚಿಂತನೆ ನಡೆಸಿದ್ದು, ಈ ಸಂಬಂದ ಬರುವ ಗಾಂಧೀ ಜಯಂತಿಯಂದು ಮಹತ್ಕಾರ್ಯಕ್ಕೆ ದೇಶಾದ್ಯಂತ ಚಾಲನೆ ಸಿಗಲಿದೆ ಎಂದು ಹೇಳಿದರು.
ಮಾತ್ರವಲ್ಲ, ಬಹು ಉಪಯೋಗಿ ಪಾಲಿಮರ್ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ಸದಾನಂದಗೌಡ ತಿಳಿಸಿದರು.