ನವದೆಹಲಿ, ಆ.24(Daijiworld News/SS): ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಏಮ್ಸ್ ಆಸ್ಪತ್ರೆ ಮೂಲಗಳು ತಿಳಿಸಿವೆ.
ತೀವ್ರ ಅನಾರೋಗ್ಯ ಸಮಸ್ಯೆಯಿಂದಾಗಿ ದೆಹಲಿ ಏಮ್ಸ್ ಆಸ್ಪತ್ರೆಗೆ ಅರುಣ್ ಜೇಟ್ಲಿ ಅವರು ದಾಖಲಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇದೇ ಆಗಸ್ಟ್ 9ರಂದು ಉಸಿರಾಟದ ತೊಂದರೆ, ಕಿಡ್ನಿ ಸಂಬಂಧಿತ ಸಮಸ್ಯೆಗಳಿಂದಾಗಿ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿರುವ ಅರುಣ್ ಜೇಟ್ಲಿ ಅವರ ಆರೋಗ್ಯ ವಿಚಾರಿಸಲು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ, ಉಮಾಭಾರತಿ, ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ, ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಬಿಜೆಪಿ ಸಂಸದೆ ಮೇನಕಾ ಗಾಂಧಿ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು.