ಬೆಂಗಳೂರು, ಆ.24(Daijiworld News/SS): ರಾಜ್ಯದಲ್ಲಿ ತಾತ್ಕಾಲಿಕವಾಗಿ ತಡೆ ಹಿಡಿದಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ಮೇರೆಗೆ ಮತ್ತೆ ಆರಂಭವಾಗಿದೆ.
ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮತ್ತೆ ಆರಂಭವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲೂ ವ್ಯವಸ್ಥಿತವಾಗಿ ವರ್ಗಾವಣೆ ಪ್ರಕ್ರಿಯೆ ನಡೆದಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮೊದಲ ಹಂತದ ವರ್ಗಾವಣೆ ಕೌನ್ಸೆಲಿಂಗ್ ಸಹ ಬಾಕಿ ಉಳಿದಿತ್ತು. ಎಲ್ಲೆಡೆ ಕೌನ್ಸೆಲಿಂಗ್ ಪುನರಾರಂಭಗೊಂಡಿದೆ. ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯಲಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿದೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ವರ್ಗಾವಣೆ ಪ್ರಕ್ರಿಯೆ ಪುನರ್ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದರು. ಸದ್ಯ ರಾಜ್ಯದಲ್ಲಿ ತಾತ್ಕಾಲಿಕವಾಗಿ ತಡೆ ಹಿಡಿದಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನರಾರಂಭಗೊಂಡಿದೆ.