ಬೆಂಗಳೂರು, ಆ 24 (Daijiworld News/RD): ಕೇಂದ್ರದ ಮಾಜಿ ಹಣಕಾಸು ಸಚಿವ, ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಇಂದು ವಿಧಿವಶರಾಗಿದ್ದು, ಅರುಣ್ ಜೇಟ್ಲಿ ಸಾವಿಗೆ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಸಚಿವ ಶ್ರೀ ರಾಮುಲು ಮೊದಲಾದ ನಾಯಕರು ಕಂಬನಿ ಮಿಡಿದಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಅರುಣ್ ಜೇಟ್ಲಿ ದೇಶಕಂಡ ಅಪರೂಪದ ಮಾಜಿ ಹಣಕಾಸು ಸಚಿವ ತೀರಿಕೊಂಡಿರೋದು ನಮಗೆಲ್ಲಾ ಆಘಾತ ಉಂಟು ಮಾಡಿದೆ. ಕಳೆದ ಇಪ್ಪತ್ತು ದಿನಗಳ ಹಿಂದೆಯಷ್ಟೇ ಅರುಣ್ ಜೇಟ್ಲಿ ಜೊತೆ ಚರ್ಚೆ ಮಾಡಿದ್ದೆ. ಕರ್ನಾಟಕದಲ್ಲಿ ಬಿಜೆಪಿ ಬೆಳವಣಿಗೆಗೆ ಅವರು ಪ್ರಮುಖ ಕಾರಣ. ನಾಳೆ ಅವರ ಅಂತ್ಯ ಸಂಸ್ಕಾರಕ್ಕೆ ದೆಹಲಿಗೆ ಹೋಗುತ್ತೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಅಂತ್ಯಕ್ರಿಯೆಯಲ್ಲಿ ನಾನು ಪಾಲ್ಗೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ನಿಧನ ವಿಷಯ ಕೇಳಿ ಆಘಾತ ಉಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದರು.
ಅರುಣ್ ಜೇಟ್ಲಿ ಸಾವಿನ ಮನಸ್ಸಿಗೆ ತುಂಬಾ ನೋವು ಉಂಟುಮಾಡಿದೆ. ದೇಶ ಕಟ್ಟುವಲ್ಲಿ ಅವರ ಕೊಡುಗೆ ಅಪಾರ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.