ನವದೆಹಲಿ, ಆ 26 (Daijiworld News/MSP): ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅನರ್ಹ ಶಾಸಕರ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ. ಹೀಗಾಗಿ ಯಡಿಯೂರಪ್ಪ ನಾಯಕತ್ವದ ಸಂಪುಟ ಸೇರುವ ಅನರ್ಹ ಶಾಸಕರ ಆಸೆಗೆ ಬ್ರೇಕ್ ಬಿದ್ದಂತಾಗಿದೆ.
ಸ್ಪೀಕರ್ ಅನರ್ಹತೆ ಪ್ರಶ್ನಿಸಿ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಸಾಲಿಸಿಟರ್ ಜನರಲ್ ಮುಕುಲ್ ರೋಹ್ಟಗಿ ಸಲ್ಲಿಸಿದ್ದರು. ಈ ಅರ್ಜಿ ತಿರಸ್ಕೃತವಾಗಬಹುದೆಂಬ ಸುಳಿವು ವಕೀಲರಿಗೆ ತಿಳಿದಿದ್ದ ಹಿನ್ನಲೆಯಲ್ಲಿ ಈ ಅರ್ಜಿಯ ಮೆನ್ಷನ್ ಗೆ ಮುಂದಾಗಿರಲಿಲ್ಲ. ಈ ನಡುವೆ ಇಂದು ತುರ್ತು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಪೀಠ ತಿರಸ್ಕ್ರರಿಸಿದೆ.
ಕಾಂಗ್ರೆಸ್-ಜೆಡಿಎಸ್ ನ 17 ಶಾಸಕರು ಸಲ್ಲಿಸಿದ್ದ ರಾಜೀನಾಮೆಯನ್ನು ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅಂಗೀಕರಿಸಿದ್ದರು. ಇದರಲ್ಲಿ 13 ಶಾಸಕರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದರು. ಈ ಹಿನ್ನಲೆಯಲ್ಲಿ ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಬಂಡಾಯ ಶಾಸಕರು ಸುಪ್ರೀಂಕೋರ್ಟ್ ಕದ ತಟ್ಟಿದ್ದರು.