ನವದೆಹಲಿ,ಆ 26 (Daijiworld News/RD): ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಸುಪ್ರೀಂ ಕೋರ್ಟ ಇಂದು ಪಿ.ಚಿದಂಬರಂ ಸಲ್ಲಿಸಿದ್ದ, ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡು, ಸಿಬಿಐ ಬಂಧನದಲ್ಲಿ ನೇರವಾಗಿ ಸುಪ್ರೀಂಗೆ ಜಾಮೀನು ಅರ್ಜಿಗೆ ಮನವಿ ಮಾಡುವಂತಿಲ್ಲ ಎಂದು ಸ್ಷಷ್ಟಪಡಿಸಿದೆ. ಜಾಮೀನು ಅವಶ್ಯಕತೆ ಇದ್ದಲ್ಲಿ ಕೆಳಹಂತದ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ.
ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ಪಿ. ಚಿದಂಬರಂ, ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಇಂದು ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಆ ಅರ್ಜಿಯನ್ನು ತಳ್ಳಿಹಾಕಿದೆ.