ಮುಂಬೈ,ಆ 26 (Daijiworld News/RD): ಹತ್ತು ವರ್ಷಗಳ ಬಳಿಕ ಮತ್ತೆ ರಾಜಕೀಯಕ್ಕೆ ಪ್ರವೇಶಿಸಲು ಬಾಲಿವುಡ್ ನಟ ಸಂಜಯ್ ದತ್ ಸಿದ್ಧರಾಗಿದ್ದಾರೆ. ಸೆಪ್ಟೆಂಬರ್ 25 ರಂದು ರಾಷ್ಟ್ರೀಯ ಸಮಾಜ ಪಕ್ಷಕ್ಕೆ ಸೇರಲು ಮುಂದಾಗಿದ್ದಾರೆ ಎಂದು ಆರ್ಎಸ್ಪಿ ಪಕ್ಷದ ಸಂಸ್ಥಾಪಕ ಮತ್ತು ಕ್ಯಾಬಿನೆಟ್ ಸಚಿವ ಮಹಾದೇವ್ ಜಂಕರ್ ಮುಂಬೈನಲ್ಲಿ ಹೇಳಿದ್ದರು.
ಭಾನುವಾರ ಪಕ್ಷದ ಕಾರ್ಯಕ್ರಮವೊಂದನ್ನು ಉದ್ಧೇಶಿಸಿ ಮಾತನಾಡಿದ ಸಚಿವ ಮಹಾದೇವ್ ಜಂಕರ್, 60 ರ ಹರೆಯದ ದತ್ ಸೆಪ್ಟೆಂಬರ್ 25 ರಂದು ರಾಷ್ಟ್ರೀಯ ಸಮಾಜ ಪಕ್ಷಕ್ಕೆ ಸೇರಲು ಸಜ್ಜಾಗಿದ್ದಾರೆ. ಕುರುಬ ಸಮುದಾಯವನ್ನು ಪ್ರತಿನಿಧಿಸುವ ತಮ್ಮ ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಆರ್ಎಸ್ಪಿ ಚಿತ್ರೋದ್ಯಮದ ನಾಯಕ ನಟರು ಇತ್ತ ಕಣ್ಣು ಹಾಯಿಸಿದ್ದಾರೆ. ಹಾಗಾಗಿ ನಮ್ಮ ಪಕ್ಷವನ್ನು ಇನ್ನಷ್ಟು ವಿಸ್ತರಿಸುವ ನಿಟ್ಟಿನಲ್ಲಿ ನಾವು ಚಲನಚಿತ್ರ ಕ್ಷೇತ್ರದವರತ್ತ ನೋಡುತ್ತಿದ್ದೇವೆ. ಇದರ ಭಾಗವಾಗಿ ನಟ ಸಂಜಯ್ ದತ್ ಸೆಪ್ಟೆಂಬರ್ 25 ರಂದು ರಾಷ್ಟ್ರೀಯ ಸಮಾಜ ಪಕ್ಷಕ್ಕೆ ಸೇರುತ್ತಿದ್ದಾರೆ" ಎಂದು ಪಶುಸಂಗೋಪನೆ ಮತ್ತು ಡೈರಿ ಅಭಿವೃದ್ಧಿ ಖಾತೆ ಸಚಿವರು ಹೇಳಿದ್ದರು.
ಆದರೆ ಇದನ್ನು ತಿರಸ್ಕರಿಸಿರುವ ನಟ ಸಂಜಯ್ ದತ್ , " ತಾನು ರಾಜಕೀಯಕ್ಕೆ ಸೇರುತ್ತೇನೆ ಮಾಧ್ಯಮದಲ್ಲಿ ವರದಿಯಾಗುತ್ತಿದೆ. ಆದರೆ ನಾನು ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ರಾಜಕೀಯಕ್ಕೆ ಪ್ರವೇಶಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. " ಮಹದೇವ್ ಜಂಕರ್ ನನ್ನ ಆತ್ಮೀಯ ಸ್ನೇಹಿತ ಮತ್ತು ನನ್ನ ಸಹೋದರ ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ನಾನು ಶುಭ ಹಾರೈಸುತ್ತೇನೆ" ಎಂದು ಹೇಳಿ ರಾಜಕೀಯ ಪ್ರವೇಶವನ್ನು ಅಲ್ಲಗಳೆದಿದ್ದಾರೆ.
ಈ ಹಿಂದೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಉತ್ತರ ಪ್ರದೇಶದಿಂದ ಸ್ಪರ್ಧಿಸಲು ಮುಂದಾಗಿದ್ದ ಸಂಜಯ್ ದತ್, ಕಾನೂನು ಅಡಚಣೆಯಿಂದ ದೂರ ಸರಿದಿದ್ದರು. 2014 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ ಆರ್ಎಸ್ಪಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಿದೆ.