ಬೆಂಗಳೂರು, ಆ 27 (Daijiworld News/RD): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಗೋವಿಂದ ಕಾರಜೋಳ, ಡಾ. ಅಶ್ವತ್ಥ ನಾರಾಯಣ ಹಾಗೂ ಲಕ್ಷ್ಮಣ ಸವದಿಗೆ ಡಿಸಿಎಂ ಪಟ್ಟ ನೀಡಿದ್ದು, ಈ ಬಗ್ಗೆ ಪಕ್ಷದ ನಾಯಕರು ಆರ್ ಅಶೋಕ್, ಜಗದೀಶ್ ಶೆಟ್ಟರ್, ಸಿಟಿ ರವಿ ಹಾಗೂ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ ಪ್ರತಿಭಟನೆ, ಆಕ್ರೋಶಕ್ಕೆ ಕಿವಿಗೊಡಬೇಡಿ ಎಂದು ಕಳಕಳಿಯಾಗಿ ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಈಶ್ವರಪ್ಪ, "ಪ್ರತಿಭಟನೆ ಹಾಗೂ ಅಸಮಾಧಾನಕ್ಕೆ ಆಸ್ಪದ ಕೊಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಈಗ ನಮ್ಮೆಲ್ಲರ ದೃಷ್ಟಿ ರಾಜ್ಯದ ಅಭಿವೃದ್ಧಿಯ ಮೇಲೆ ಮಾತ್ರ ಇರಬೇಕು. ಅತಿವೃಷ್ಠಿ-ಅನಾವೃಷ್ಠಿಯಿಂದ ಬಳಲಿರುವ ಜನರಿಗೆ ಬೆಂಬಲಗಾಗಿ ನಿಲ್ಲಬೇಕು. ಪಕ್ಷದ ವರಿಷ್ಠರು ನಿರ್ಧರಿಸಿ ನಿಯೋಜಿಸಿರುವ ಜವಾಬ್ದಾರಿಯನ್ನು ನಿಭಾಯಿಸಲು ನಾವು ಕಾರ್ಯ ತತ್ಪರರಾಗಬೇಕು. ಯಾವುದೇ ಪ್ರತಿಭಟನೆ, ಅಸಮಾಧಾನಕ್ಕೆ ಆಸ್ಪದ ಕೊಡಬಾರದು ಎಂದು ನನ್ನ ಕಳಕಳಿಯ ಮನವಿ” ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಬಾರಿಯ ಬಿಜೆಪಿ ಸರ್ಕಾರದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಉಪಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದರು. ಈ ಬಾರಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ, ಶ್ರೀರಾಮುಲು ಅವರಂಥ ಹಿರಿಯರನ್ನು ತಳ್ಳಿ ಈ ಮೂವರನ್ನು ಡಿಸಿಎಂ ಹುದ್ದೆಗೆ ನೇಮಿಸುವ ಮೂಲಕ ಇತರ ಶಾಸಕರಿಗೆ ಶಾಕ್ ನೀಡಿದ್ದಾರೆ. ಈ ಮೂಲಕ ಮೂರು ಪ್ರತ್ಯೇಕ ಅಧಿಕಾರ ಕೇಂದ್ರಗಳನ್ನು ಸೃಷ್ಟಿಸುವ ಮೂಲಕ ಯಡಿಯೂರಪ್ಪ ಸರಕಾರದ ಮೇಲೆ ಹೈಕಮಾಂಡ್ ಹಿಡಿತ ಸಾಧಿಸಿದೆ. ಸರ್ಕಾರದ ಈ ನಿರ್ಣಯಕ್ಕೆ ಬಹಿರಂಗವಾಗಿ ಪಕ್ಷದೊಳಗೆ ಕೆಲ ಶಾಸಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.