ನವದೆಹಲಿ,ಆ 27 (Daijiworld News/RD): ಮೈತ್ರಿ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ 17 ಅನರ್ಹ ಶಾಸಕರು ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ.
ಅನರ್ಹ ಶಾಸಕರು ಜುಲೈ 26 ಮತ್ತು ಆಗಸ್ಟ್ 1 ರಂದು ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಶಾಸಕರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ತುರ್ತು ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್ನ ದ್ವಿಸದಸ್ಯ ನ್ಯಾಯಪೀಠ. ಅರ್ಜಿಯನ್ನು ಯಾವಾಗ, ಯಾವ ಪೀಠದಿಂದ ವಿಚಾರಣೆ ನಡೆಸಲಾಗುವುದು ಎಂಬುವುದರ ಕುರಿತು ಮಾಹಿತಿ ನೀಡಿಲ್ಲ.
ಕೇಂದ್ರ ಸರ್ಕಾರದ ಮಾಜಿ ಅಟಾರ್ನಿ ಜನರಲ್ ಆಗಿರುವ ಮುಕುಲ್ ರೋಹಟಗಿ ಅವರು ಅನರ್ಹ ಶಾಸಕರ ಪರವಾಗಿ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಲಿದ್ದು, ಇವತ್ತು ವಕೀಲ ಗಿರಿ ಅವರು ಪ್ರಕರಣವನ್ನು ಪ್ರಸ್ತಾಪ ಮಾಡಿದರು. ನ್ಯಾ.ರಮಣ ನೇತೃತ್ವದ ದ್ವಿಸದಸ್ಯ ಪೀಠವು ಈ ಕೇಸ್ ವಿಚಾರಣೆಗೆ ಒಪ್ಪಿಕೊಂಡಿತು. ಸದ್ಯ ಸುಪ್ರೀಂ ಕೋರ್ಟ್ನಲ್ಲಿ ಅಯೋಧ್ಯೆ ವಿಚಾರಣೆ ನಡೆಯುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.