ಚಿಕ್ಕಮಗಳೂರು, ಆ 27 (DaijiworldNews/SM): ರಾಜ್ಯದಲ್ಲಿನ ನೆರೆ ಪೀಡಿತ ಪ್ರದೇಶ ಸಿಎಂ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರು.
ಮಳೆ ಹಾನಿಗೋಳಗಾದ ಹಾಗೂ ಭೂ ಕುಸಿತಗೊಂಡ ಬಾಳೂರು, ಜಾವಳಿ ಮತ್ತು ಮಲೆಮನೆ ಪ್ರದೇಶಗಳಿಗೆ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಸಚಿವ ಸಿ.ಟಿ. ರವಿ ಭೇಟಿ ನೀಡಿದರು. ಈ ಸಂದರ್ಭ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಪರಿಹಾರ ಕಾರ್ಯಗಳ ಬಗ್ಗೆ ಚರ್ಚಿಸಿದರು.
ಅಲ್ಲದೆ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅವಹಾಲುಗಳನ್ನು ಸ್ವೀಕರಿಸಿದರು. ಅಲ್ಲದೆ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.