ಬೆಂಗಳೂರು,ಆ 29 (Daijiworld News/RD): ಸುಪ್ರೀಂ ಕೋರ್ಟ್ ತೀರ್ಪು ಬರೋತನಕ ಉಪ ಚುನಾವಣೆ ನಡೆಸದಂತೆ ಚುನಾವಣೆ ಆಯೋಗಕ್ಕೆ ಅನರ್ಹ ಶಾಸಕರು ಮನವಿ ಸಲ್ಲಿಸಿದ್ದಾರೆ.
ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾದ ಈ 17 ಅತೃಪ್ತ ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದ ಬೆನ್ನಲ್ಲೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಈ ಶಾಸಕರು ಅರ್ಜಿಯ ತುರ್ತು ವಿಚಾರಣೆಗೆ ಪಟ್ಟು ಹಿಡಿದ್ದರು. ಆದರೆ ಇದಕ್ಕೆ ಮಂಗಳವಾರ ತ್ರಿಸದಸ್ಯ ಪೀಠ ವಿಚಾರಣೆಗೆ ಒಪ್ಪಿಗೆ ಸೂಚಿಸಿದೆ. ಇನ್ನು ರಾಜ್ಯದಲ್ಲಿ ಇನ್ನೊಂದೆಡೆ ಅತೃಪ್ತ ಶಾಸಕರ ಸ್ಥಾನಕ್ಕೆ ಶಾಸಕರನ್ನು ನೇಮಿಸಲು ಉಪಚುನಾವಣೆ ನಡೆಸಲು ತಯಾರಿ ಶುರುವಾಗಿದೆ. ಈ ಬಗ್ಗೆ ಕಂಗ್ಗೆಟ್ಟ ಅನರ್ಹ ಶಾಸಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಬರೋತನಕ ಉಪ ಚುನಾವಣೆ ನಡೆಸದಂತೆ ಚುನಾವಣೆ ಆಯೋಗಕ್ಕೆ ಅನರ್ಹರು ಮನವಿ ಮಾಡಿದ್ದಾರೆ.
ಆದ್ದರಿಂದ ಅನರ್ಹ ಶಾಸಕರಾದ ಕಾಂಗ್ರೆಸ್ಸಿನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ರಾಣೆಬೆನ್ನೂರು ಶಾಸಕ ಆರ್ ಶಂಕರ್, ಮಸ್ಕಿ ಶಾಸಕ ಪ್ರತಾಪ್ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಕಾಗವಾಡದ ಶ್ರೀಮಂತ್ ಪಾಟೀಲ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್. ಜೆಡಿಎಸ್ ಶಾಸಕರಾದ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಅವರು ಸೇಫ್ ಗೇಮ್ನತ್ತ ತಮ್ಮ ಕಣ್ಣು ಹಾಯಿಸಿದ್ದಾರೆ.