ಚಿಕ್ಕಮಗಳೂರು, ಆ.30(Daijiworld News/SS): ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ.
ರಾಷ್ಟ್ರೀಯ ಹೆದ್ದಾರಿ 73ರ (ಹಳೆಯ ಸಂಖ್ಯೆ-234) ಮಂಗಳೂರು-ವಿಲ್ಲುಪುರಂ ರಸ್ತೆಯ ಚಿಕ್ಕಮಗಳೂರು ವ್ಯಾಪ್ತಿಯ 86.200 ರಿಂದ 99.200 ಕಿ.ಮೀ (ಕೊಟ್ಟಿಗೆಹಾರ) ವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಟ್ಟಿದೆ.
ಭಾರಿ ಪ್ರಮಾಣದ ಮಳೆಯಿಂದ ಗುಡ್ಡ ಕುಸಿತ ಹಾಗೂ ಮರಗಳು ರಸ್ತೆಗುರುಳಿದ ಹಿನ್ನಲೆಯಲ್ಲಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಮೋಟಾರು ವಾಹನಗಳ ಕಾಯ್ದೆ ಪ್ರಕಾರ ಕೊಟ್ಟಿಗೆಹಾರ ವ್ಯಾಪ್ತಿಯವರಗೆ ವಾಹನಗಳ ಸಂಚಾರವನ್ನು ಸೆಪ್ಟೆಂಬರ್ 14ರ ವರೆಗೆ ನಿಷೇಧಿಸಲಾಗಿತ್ತು. ಇದೀಗ ಮಳೆಗಾಲ ಮುಗಿಯುವವರೆಗೆ ಲಘು ವಾಹನಗಳಾದ ಕಾರುಗಳು, ಜೀಪು, ಟೆಂಪೋ, ವ್ಯಾನ್, ಎಲ್ಸಿವಿ (ಮಿನಿ ವ್ಯಾನ್) ದ್ವಿಚಕ್ರ ವಾಹನಗಳು ಹಾಗೂ ಆಂಬುಲೆನ್ಸ್ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.
ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು, ಲಾರಿಗಳು, ಬುಲೆಟ್ ಟ್ಯಾಂಕರ್ಗಳು, ಷಿಪ್ ಕಾರ್ಗೋ ಕಂಟೈನರ್ಸ್ ಹಾಗೂ ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಆಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿದೆ.