ಚೆನ್ನೈ, ಸೆ 1 (Daijiworld News/RD): ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ನ ಬಳಕೆ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಜಾಗೃತಿ ಮೂಡಿಸಲು 9 ಜನ ಅಂಧರು ಸೆಣಿಬಿನ ಚೀಲ ಹೋಲಿದಿದ್ದು, ಕಣ್ಣಿದ್ದು ಅಂಧರಂತೆ ಪ್ಲಾಸ್ಟಿಕ್ ಬಳಸುತ್ತಿರುವ ನಾಗರಿಕರ ಮುಂದೆ ಉತ್ತಮ ಉದಾಹರಣೆಯಾಗಿ ನಿಂತಿದ್ದಾರೆ. ಇದು ‘ವಿಶ್ವದ ಅತಿ ದೊಡ್ಡ ಸೆಣಬಿನ ಚೀಲ’ ಆಗಿದ್ದು, ಈ ಮೂಲಕ ಗಿನ್ನಿಸ್ ದಾಖಲೆಯನ್ನು ನಿರ್ಮಿಸಿದೆ.
ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ 9 ಅಂಧ ವಿದ್ಯಾರ್ಥಿಗಳು ಶುಕ್ರವಾರ ಈ ಚೀಲವನ್ನು ಹೊಲಿದಿದ್ದು, ಕೇವಲ 5 ಗಂಟೆಗಳಲ್ಲಿ 65 ಅಡಿ ಎತ್ತರ ಹಾಗೂ 33 ಅಡಿ ಅಗಲದ ‘ವಿಶ್ವದ ಅತಿ ದೊಡ್ಡ ಸೆಣಬಿನ ಚೀಲ’ವನ್ನು ಹೊಲಿಯುವ ಈ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಇವರಿಗೆ ತೃತೀಯ ಲಿಂಗಿಗಳ ಸಮುದಾಯದ ಸದಸ್ಯರು ಹಾಗೂ ತಾಂತ್ರಿಕ ಸಂಸ್ಥೆಯ ವಿದ್ಯಾರ್ಥಿಗಳು ಸಹಾಯ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಯುವ ಪ್ರತಿಷ್ಠಾನದ ಅಧ್ಯಕ್ಷೆ ಶಶಿಕಲಾ, ಯುವ ಪ್ರತಿಷ್ಠಾನದ 9 ಜನ ಅಂಧರು ಕೇವಲ ಕೈಗಳಿಂದ 5 ಗಂಟೆಗಳಲ್ಲಿ ೬೫ ಅಡಿ ಎತ್ತರ ಹಾಗೂ 33 ಅಡಿ ಅಗಲದ ‘ವಿಶ್ವದ ಅತಿ ದೊಡ್ಡ ಸೆಣಬಿನ ಚೀಲವನ್ನು’ ಹೊಲಿಯುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಲು ಮುಂದಾಗಿದ್ದಾರೆ. ಪರಿಸರಕ್ಕೆ ಹಾನಿಕಾರಕ ಪ್ಲಾಸ್ಟಿಕ್ ಚೀಲಗಳ ಬಳಕೆ ನಿಲ್ಲಿಸಲು ಹಾಗೂ ಇದಕ್ಕೆ ಪರ್ಯಾಯವಾಗಿ ಪರಿಸರ ಸ್ನೇಹಿ ಚೀಲಗಳನ್ನು ಬಳಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.
ಈ ಕಾರ್ಯವನ್ನು ಸಂಘಟಿಸಿದ ಯುವ ಪ್ರತಿಷ್ಠಾನದ ಅಧ್ಯಕ್ಷೆ ಶಶಿಕಲಾ ಈ ಕುರಿತು ಮಾಹಿತಿ ನೀಡಿ, ಯುವ ಪ್ರತಿಷ್ಠಾನದ 9 ಜನ ಅಂಧರು ಹ್ಯಾಂಡಲ್ ಇಲ್ಲದೆ, ಕೇವಲ ಕೈಗಳಿಂದ 5 ಗಂಟೆಗಳಲ್ಲಿ ೬೫ ಅಡಿ ಎತ್ತರ ಹಾಗೂ 33 ಅಡಿ ಅಗಲದ ‘ವಿಶ್ವದ ಅತಿ ದೊಡ್ಡ ಸೆಣಬಿನ ಚೀಲವನ್ನು’ ಹೊಲಿಯುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಲು ಮುಂದಾಗಿದ್ದಾರೆ. ಪರಿಸರಕ್ಕೆ ಹಾನಿಕಾರಕ ಪ್ಲಾಸ್ಟಿಕ್ ಚೀಲಗಳ ಬಳಕೆ ನಿಲ್ಲಿಸಲು ಹಾಗೂ ಇದಕ್ಕೆ ಪರ್ಯಾಯವಾಗಿ ಪರಿಸರ ಸ್ನೇಹಿ ಚೀಲಗಳನ್ನು ಬಳಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಹೀಗಾಗಿ ಸೆಣಬಿನ ಚೀಲವನ್ನು ಹೊಲಿಯಲಾಗಿದೆ ಎಂದು ಹೇಳಿದರು.