ಚೆನ್ನೈ, ಸೆ 01(DaijiworldNews/SM): ಕೇಂದ್ರ ಸರಕಾರ ಬ್ಯಾಂಕ್ ಗಳ ವಿಲೀನ ಮಾಡುತ್ತಿದ್ದು, ಇದರಿಂದ ಉದ್ಯೋಗ ನಷ್ಟವಾಗಲಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಆದರೆ, ಇದರಿಂದ ಯಾವುದೇ ಉದ್ಯೋಗಿಗಳನ್ನು ಕೆಲಸದಿಂದ ತೆರವುಗೊಳಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.
ಚೆನ್ನೈನಲ್ಲಿ ಮಾತನಾಡಿದ ಅವರು, ಬ್ಯಾಂಕ್ ಗಳ ವಿಲೀನದ ನಂತರ ಒಬ್ಬೇ ಒಬ್ಬ ಉದ್ಯೋಗಿಯನ್ನು ತೆಗೆಯಲ್ಲ ಎಂದಿದ್ದಾರೆ. ಈ ಬಗ್ಗೆ ತಪ್ಪಾದ ಮಾಹಿತಿ ರವಾನಿಸಲಾಗುತ್ತಿದೆ. ಎಲ್ಲ ಬ್ಯಾಂಕ್ ಗಳ ನೌಕರರ ಒಕ್ಕೂಟಗಳಿಗೂ ಸ್ಪಷ್ಟಪಡಿಸುತ್ತೇನೆ. ಒಬ್ಬ ಉದ್ಯೋಗಿಯನ್ನು ಕೂಡ ಕೆಲಸದಿಂದ ತೆಗೆಯುವುದಿಲ್ಲ ಎಂದು ಅವರು ಹೇಭರವಸೆ ನೀಡಿದ್ದಾರೆ.
ಉದ್ಯೋಗ ಹೋಗಬಹುದು ಎಂಬ ಆತಂಕದಲ್ಲಿ ಬ್ಯಾಂಕ್ ಗಳ ನೌಕರರ ಒಕ್ಕೂಟದಿಂದ ವಿಲೀನಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದಾರೆ.