ಬೆಂಗಳೂರು, ಜೂ. 15 (DaijiworldNews/TA): ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸೋಮವಾರ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಮುಂಜಾನೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪವಿತ್ರ ಮಾಲೆ ಧರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದ ಅವರು, ರಾತ್ರಿ ವೇಳೆ ಶಬರಿಮಲೆ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾಮಿ ದರ್ಶನ ಪಡೆಯಲಿದ್ದಾರೆ.

ದರ್ಶನದ ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿದಂತೆ ವಿಶೇಷ ಪೂಜೆಗಳಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಕುಮಾರಸ್ವಾಮಿ ಅವರೊಂದಿಗೆ ಮಾಜಿ ಸಚಿವ ಎಸ್. ಆರ್. ಮಹೇಶ್, ಎಸ್. ಎಸ್. ಪುಟ್ಟರ್ಜು, ಜೆಡಿಎಲ್ಪಿ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಸೇರಿದಂತೆ ಸುಮಾರು 30 ಮಂದಿ ಭಕ್ತರ ತಂಡ ಶಬರಿಮಲೆಗೆ ತೆರಳಿದೆ.