ನವದೆಹಲಿ, ಸೆ 02 (DaijiworldNews/SM): ಐಎನ್ಎಕ್ಸ್ ಮೀಡಿಯಾ ಹಗರಣದಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ.
ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂಗೆ ಸೋಮವಾರದಂದು ಸುಪ್ರೀಂಕೋರ್ಟ್ ಶುಭ ಸುದ್ದಿ ನೀಡಿದೆ. ಜಾಮೀನು ಅರ್ಜಿ ಸಲ್ಲಿಸಲು ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಅಲ್ಲದೆ ಮುಂದಿನ ಆದೇಶ ನೀಡುವ ತನಕ ಚಿದು ಅವರನ್ನು ಬಂಧಿಸಿ ಜೈಲಿಗಟ್ಟುವಂತಿಲ್ಲ ಎಂದು ನ್ಯಾಯಮೂರ್ತಿಗಳು ಸೂಚನೆ ನೀಡಿದ್ದಾರೆ.
ಪಿ ಚಿದಂಬರಂ ಬಂಧನದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಇಂದ್ರಾಣಿ ಒಂದು ವೇಳೆ ವಿಚಾರಣಾ ನ್ಯಾಯಾಲಯವು ಚಿದಂಬರಂ ಅರ್ಜಿ ತಿರಸ್ಕರಿಸಿದರೆ, ಕಸ್ಟಡಿಯಲ್ಲೇ ವಿಚಾರಣೆಯನ್ನು ಗುರುವಾರದ ತನಕ ನಡೆಸಬೇಕು, ಗುರುವಾರದವರೆಗೂ ಕಸ್ಟಡಿಯಲ್ಲೇ ವಿಚಾರಣೆ ನಡೆಸಲು ಸೂಚನೆ ನೀಡಲಾಗಿದೆ.