ರಾಯಚೂರು, ಸೆ.03(Daijiworld News/SS): ಮಹಾರಾಷ್ಟ್ರದಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದ್ದು, ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.
ಮಹಾರಾಷ್ಟ್ರದ ಕೃಷ್ಣಾನದಿ ಕಣಿವೆ ಪ್ರದೇಶದಲ್ಲಿ ಮತ್ತೆ ಧಾರಾಕಾರ ಮಳೆ ಬೀಳುತ್ತಿದ್ದು, ನಾರಾಯಣಪುರ ಜಲಾಶಯದಿಂದ ಹೊರಹರಿವು ಹೆಚ್ಚಿಸಲಾಗಿದೆ. ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ನಾರಾಯಣಪುರ ಜಲಾಶಯದಿಂದ ನದಿಗೆ ಮತ್ತೆ ನೀರು ಬಿಡುಗಡೆ ಮಾಡಲಾಗಿದ್ದು, 7 ಗೇಟ್ಗಳನ್ನು ತೆರೆದು 34,800 ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಜಲಾಶಯಕ್ಕೆ 35 ಸಾವಿರ ಕ್ಯೂಸೆಕ್ ನೀರು ಒಳಹರಿವಿದೆ. ಒಳ ಹರಿವು ಹೆಚ್ಚಾದಂತೆ ನದಿಗೆ ಹೆಚ್ಚುವರಿ ನೀರು ಬಿಡಲಾಗುತ್ತಿದೆ.