ಬೆಂಗಳೂರು, ಸೆ.04(Daijiworld News/SS): ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಬಂಧನಕ್ಕೆ ಕಿಡಿಕಾರಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಶಿವಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ. ಡಿಕೆಶಿ ಬಂಧನದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯದ ತನಿಖೆಗೆ ಡಿಕೆ ಶಿವಕುಮಾರ್ ಎಲ್ಲಾ ರೀತಿಯಲ್ಲಿ ಸಹಕಾರ ನೀಡಿದ್ದರು. ಹಬ್ಬದಂದು ಅವರ ಕುಟುಂಬದ ಕಾರ್ಯ ನೆರವೇರಿಸಲು ಸಹ ಅವಕಾಶ ನೀಡದೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿಷ್ಕರುಣೆಯಿಂದ ನಡೆದುಕೊಂಡಿದ್ದಾರೆ. ಅಧಿಕಾರಿಗಳ ಈ ಕ್ರಮ ಸರಿಯಲ್ಲ ಎಂದು ಟೀಕಿಸಿದರು.
ಡಿಕೆ ಶಿವಕುಮಾರ್ ಅವರ ತಂದೆಗೆ ಎಡೆ ಇಡುವ ಕಾರ್ಯಕ್ಕೂ ಸಹ ಅವಕಾಶ ನೀಡದಿರುವ ಘಟನೆ ತಮ್ಮ ಮನಸಿಗೆ ಬೇಸರ ಉಂಟು ಮಾಡಿದೆ. ಒಂದು ದಿನ ಅವಕಾಶ ನೀಡಿದ್ದರೆ ಏನಾಗುತ್ತಿತ್ತು...? ಎಂದು ಪ್ರಶ್ನಿಸಿದರು.