ನವದೆಹಲಿ, ಸೆ 04 (DaijiworldNews/SM): 2017ರಲ್ಲಿ ನೋಟ್ ಬ್ಯಾನ್ ಸಂದರ್ಭ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಬುಧವಾರದಂದು ದೆಹಲಿ ಕೋರ್ಟ್ ಗೆ ಹಾಜರು ಪಡಿಸಲಾಗಿದ್ದು, ಸೆಪ್ಟೆಂಬರ್ 13ರ ತನಕ ಅವರನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲು ಕೋರ್ಟ್ ಆದೇಶ ನೀಡಿದೆ.
ಡಿಕೆ ಶಿವಕುಮಾರ್ ಅವರನ್ನು ಮಂಗಳವಾರದಂದು ಸಂಜೆ ಬಂಧಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಉಂಟಾದ ಏರುಪೇರಿನಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬುಧವಾರ ಮಧ್ಯಾಹ್ನ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿದೆ. ವಾದ ಪ್ರತಿವಾದ ಆಲಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಸೆಪ್ಟೆಂಬರ್ 13ರವರೆಗೂ ಡಿಕೆ ಶಿವಕುಮಾರ್ ಅವರನ್ನು ಇಡಿ ವಶಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದರು.