ನವದೆಹಲಿ,ಸೆ 05 (Daijiworld News/RD): ವಿದ್ಯಾರ್ಥಿಗಳನ್ನು ತಿದ್ದಿ, ಅವರಿಗೆ ಉತ್ತಮ ಮಾರ್ಗದರ್ಶನ ನೀಡಿ, ಆ ಮೂಲಕ ಬಲವಾದ ಮತ್ತು ಸಮೃದ್ಧ ರಾಷ್ಟ್ರವನ್ನು ರೂಪಿಸುವೆಡೆಗೆ ಕೊಡುಗೆ ನೀಡುತ್ತಿರುವ ಎಲ್ಲಾ ಶಿಕ್ಷಕರ ಸಮುದಾಯಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಶಿಕ್ಷಕರ ದಿನಾಚರಣೆಯ ದಿನದಂದು ಶುಭ ಕೋರಿದ್ದಾರೆ.
ಈ ಶುಭ ಸಂದರ್ಭದಲ್ಲಿ ಎಲ್ಲಾ ಶಿಕ್ಷಕ ವರ್ಗದವರಿಗೂ ಶುಭಾಶಯ ತಿಳಿಸಲು ಇಚ್ಚುಸುತ್ತೇನೆ. ಮತ್ತು ಉತ್ತಮ ಸಾಧನೆ ಮಾಡಿದ ಶಿಕ್ಷಕರನ್ನು ಗೌರವಿಸಲು ನನಗೆ ತುಂಬಾ ಸಂತೋಷವಾಗಿದೆ ಎಂದು ಕೋವಿಂದ್ ತಮ್ಮ ಸಂದೇಶದಲ್ಲಿ ತಿಳಿಸಿದರು.
ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ, ನಾವು ಒಬ್ಬ ಪ್ರಖ್ಯಾತ ರಾಜಕಾರಣಿ, ಶ್ರೇಷ್ಠ ವಿದ್ವಾಂಸರು ಮತ್ತು ಬೋಧನಾ ಭ್ರಾತೃತ್ವದ ಅತ್ಯಂತ ಶ್ರೇಷ್ಠ ವ್ಯಕ್ತಿಗಳಿಗೆ ಗೌರವ ಸಲ್ಲಿಸುತ್ತೇವೆ ಎಂದು ಅವರು ಹೇಳಿದರು.