ಜಮ್ಮು-ಕಾಶ್ಮೀರ, ಸೆ 07 (Daijiworld News/MSP): ಜಮ್ಮು-ಕಾಶ್ಮೀರದ ಸೋಪೋರ ಜಿಲ್ಲೆಯ ಡಾಂಗೆಪೋರಾ ಪ್ರದೇಶದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು ಮನಬಂದಂತೆ ನಡೆಸಿದ ದಾಳಿಯಲ್ಲಿ ಹೆಣ್ಣು ಮಗುವೊಂದು ಸೇರಿದಂತೆ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಉಗ್ರರ ದಾಳಿಯಿಂದಾಗಿ ಹೆಣ್ಣು ಮಗು ಸೇರಿದಂತೆ ನಾಲ್ವರು ಗಾಯಗೊಂಡಿರುವುದಾಗಿ ಜಮ್ಮು-ಕಾಶ್ಮೀರ ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.ನಾಲ್ಕು ಮಂದಿ ಹಾಗೂ ಉಸ್ಮಾ ಜಾನ್ ಗಾಯಗೊಂಡಿರುವ ಹೆಣ್ಣು ಮಗುವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗಾಯಗೊಂಡವರ ಆರೋಗ್ಯ ಸ್ಥಿರವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.