ಬೆಂಗಳೂರು, ಸೆ.08(Daijiworld News/SS): ಯಾವುದೇ ಟೀಕೆಗಳು ಬಂದರೂ ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಮತ್ತು ಅಭಿವೃದ್ಧಿ ಹೆಸರಲ್ಲಿ ಭ್ರಷ್ಟಾಚಾರ ಸಹಿಸಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕುಮಾರಸ್ವಾಮಿ ಟ್ವೀಟ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಾನು ನನ್ನ ಕೆಲಸ ಮಾಡುತ್ತಿದ್ದೇನೆ. ಟೀಕೆಗಳು ಬರುತ್ತವೆ. ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಹೇಳಿಕೆಗಳಿಗೆಲ್ಲ ಪ್ರತಿಕ್ರಿಯೆ ಕೊಡಬಾರದೆಂದು ನಿರ್ಧಾರ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಅಭಿವೃದ್ಧಿ ಹೆಸರಲ್ಲಿ ಭ್ರಷ್ಟಾಚಾರ ಸಹಿಸಲ್ಲ. ಇದರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಬೇಕು. ಸಾರ್ವಜನಿಕರು ನನ್ನ ಗಮನಕ್ಕೆ ತಂದರೆ ಮುಲಾಜಿಲ್ಲದೇ ಭ್ರಷ್ಟಾಚಾರದ ವಿರುದ್ದ ಕ್ರಮ ಕೈಗೊಳ್ಳುವೆ ಎಂದು ಹೇಳಿದರು.
ಬೆಂಗಳೂರು ಅಭಿವೃದ್ಧಿಗೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಅಭಿವೃದ್ಧಿ ವಿಚಾರವಾಗಿ ಬೆಂಗಳೂರಿನ ಸಂಸದರು, ಶಾಸಕರು ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸುತ್ತೇವೆ. ಬೆಂಗಳೂರು ವಿಶ್ವ ದರ್ಜೆಯ ನಗರ ಮಾಡುವ ಗುರಿ ನಮಗಿದೆ. ಸದ್ಯದಲ್ಲೇ ಐಟಿಬಿಟಿ ಕಂಪನಿಗಳ ಸಭೆ ಕರೆಯುತ್ತೇನೆ. ನಗರದಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳುವೆ. ಕಾರವಾರಕ್ಕೆ ತೆರಳಿ ಅತಿವೃಷ್ಟಿ ಬಗ್ಗೆ ಮಾಹಿತಿ ಪಡೆಯುವೆ. ಕೇಂದ್ರದಿಂದ ಹೆಚ್ಚಿನ ಅನುದಾನ ಸಿಗುವ ಭರವಸೆ ಇದೆ ಎಂದರು.