ಬೆಂಗಳೂರು, ಸೆ.10(Daijiworld News/SS): ಇ.ಡಿ ಸಮನ್ಸ್ ರದ್ದು ಕೋರಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ವಿಭಾಗೀಯ ಪೀಠದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸೆ.11ಕ್ಕೆ ಮುಂದೂಡಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿರುವ ಸಮನ್ಸ್ ರದ್ದುಗೊಳಿಸಬೇಕು ಎಂದು ಕೋರಲಾಗಿದ್ದ ಅರ್ಜಿ ವಜಾ ಮಾಡಿರುವ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಶಾಸಕ ಡಿ.ಕೆ.ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು.
ಈ ಮೇಲ್ಮನವಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಡಿ.ಕೆ.ಶಿವಕುಮಾರ್ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಮನವಿ ಮಾಡಿದರು.
ಇದೀಗ ನ್ಯಾಯಪೀಠ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಇದೇ 11ಕ್ಕೆ ನಿಗದಿಗೊಳಿಸಿದೆ.