ನವದೆಹಲಿ, ಜು. 30 (DaijiworldNews/AK): ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಜೆರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವ ಹಾಕಿ ಇಂಡಿಯಾ ನಿರ್ಧಾರವನ್ನು ವಯನಾಡ್ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರವಾಗಿ ಖಂಡಿಸಿದ್ದಾರೆ.

ದೇಶದ ಇತಿಹಾಸ ಮತ್ತು ಪರಂಪರೆಯನ್ನು ಬದಲಾಯಿಸಲು ನಡೆಯುತ್ತಿರುವ ಪ್ರಯತ್ನಗಳಲ್ಲಿ ಇದೂ ಒಂದು ಎಂದು ಅವರು ಆರೋಪಿಸಿದ್ದಾರೆ.
ಮುಂಗಾರು ಅಧಿವೇಶನದ ಆಗಮಿಸಿದ ವೇಳೆ ಸಂಸತ್ತಿನ ಹೊರಗಡೆ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ತಂಡದ ಸಮವಸ್ತ್ರವನ್ನೇ ಬದಲಾಯಿಸಲಿ ಅಥವಾ ಶಿಕ್ಷಣ ನೀತಿಯ ಮೂಲಕ ಇತಿಹಾಸವನ್ನೇ ತಿರುಚಲು ಯತ್ನಿಸಲಿ. ದೇಶದ ಯುವಜನತೆ ಈ ಬಗ್ಗೆ ಏನು ಯೋಚಿಸುತ್ತಿದ್ದಾರೆ ಎಂಬುದನ್ನು ನೀವು ನೋಡಿದ್ದೀರಿ. ಜಂತರ್ ಮಂತರ್ನಲ್ಲಿ ನೆರೆದಿದ್ದ ಯುವಕರು ಆಡಿದ ಮಾತುಗಳನ್ನು ಕೇಳಿದ್ದೀರಿ. ಅದೇ ಈ ದೇಶದ ನಿಜವಾದ ಧ್ವನಿ” ಎಂದು ಹೇಳಿದರು.