ನವದೆಹಲಿ,ಜು. 30 (DaijiworldNews/AK): ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯ ವೇಳೆ ನಡೆದ ಪೊಲೀಸರ ಹಲ್ಲೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಹಿಸಿರುವ ಮೌನವನ್ನು ಕಾಂಗ್ರೆಸ್ ಮುಖ್ಯಸ್ಥ ರಾಗೂ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ.

ಪರೀಕ್ಷಾ ಅಕ್ರಮ ತಡೆ ವಿಧೇಯಕವನ್ನು ಮೇಲ್ಮನೆಯಲ್ಲಿ ಮಂಡಿಸಿದ ನಂತರ ಮಾತನಾಡಿದ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ಕಲಾಪಕ್ಕೆ ಗೈರುಹಾಜರಾಗಿರುವುದಕ್ಕೆ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ಪಷ್ಟನೆ ಕೋರಿದರು. ಕಚೇರಿಯೊಳಗೆ ಅಡಗಿ ಕುಳಿತಿರುವ ಅಮಿತ್ ಶಾ ಅವರನ್ನು ಎಳೆದುಕೊಂಡು ಬಂದು ಜನರಿಗೆ ಒಪ್ಪಿಸಬೇಕು ಎಂದು ಖರ್ಗೆ ವಾಗ್ದಾಳಿ ನಡೆಸಿದರು. ಇದರಿಂದ ಸದನದಲ್ಲಿ ಗದ್ದಲ ಉಂಟಾಯಿತು.
ಇಂದು ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕವನ್ನು ಮೇಲ್ಮನೆಯಲ್ಲಿ ಮಂಡಿಸಿದ ನಂತರ ಮಾತನಾಡಿದ ರಾಜ್ಯಸಭಾ ಹಿರಿಯ ಸಂಸದ ಹಾಗೂ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ವಿರುದ್ಧ ನಡೆದ ಹಿಂಸಾಚಾರದ ಕುರಿತು ಸರ್ಕಾರ ಸತ್ಯವನ್ನು ಹೊರಹಾಕಬೇಕು. ಅಮಿತ್ ಶಾ ಅವರು ಮುಚ್ಚಿದ ಬಾಗಿಲ ಹಿಂದೆ ಅಡಗಿರಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.