ನವದೆಹಲಿ, ಆ. 07 (DaijiworldNews/AA): ನಗರದ ಮಧ್ಯಭಾಗದಲ್ಲಿರುವ ಜಂತರ್ ಮಂತರ್ ಪ್ರದೇಶವನ್ನು ಪ್ರತಿಭಟನಾ ಸ್ಥಳವಾಗಿ ಬಳಸುವುದನ್ನು ಸಂಪೂರ್ಣವಾಗಿ ಮುಚ್ಚುವ ಬಗ್ಗೆ ಏಕೆ ಪರಿಶೀಲಿಸುತ್ತಿಲ್ಲ ಎಂದು ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಮಹಾಜನ್ ಅವರು, "ನನ್ನ ಪ್ರಕಾರ ಇಂತಹ ಪ್ರತಿಭಟನೆಗಳು ನಗರದ ಒಳಗೆ ನಡೆಯಬಾರದು. ಆದರೆ ಇದು ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದ್ದು. ಇಂತಹ ಪ್ರತಿಭಟನೆಗಳಿಂದ ಇಡೀ ನಗರವನ್ನು ವಿನಾಕಾರಣ ಒತ್ತೆಯಾಳಾಗಿ ಇಡುವುದು ಎಷ್ಟು ಸರಿ?" ಎಂದು ಹೇಳಿದ್ದಾರೆ.
ಅಂಬುಲೆನ್ಸ್ ಸಂಚಾರ ಸೇರಿದಂತೆ ನಗರದ ದೈನಂದಿನ ಚಟುವಟಿಕೆಗಳಿಗೆ ಪ್ರತಿಭಟನೆಗಳಿಂದ ತೊಂದರೆಯಾಗುತ್ತದೆ. ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳವಾಗಿ ಬಂದ್ ಮಾಡುವಂತೆ ಸಲಹೆ ನೀಡಿದರು