ಬೆಂಗಳೂರು, ಆ. 07 (DaijiworldNews/AA): ಗೂಂಡಾಗಿರಿ ಮಾಡಿ ತಮ್ಮ ತಂಡ ಕಟ್ಟಿಕೊಂಡು ಹೋಗಿ ಬಲವಂತವಾಗಿ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕೊಡಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.

ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಸಲ್ಲಿಸಿದ ವಿಚಾರವಾಗಿ ಅಸಮಾಧಾನ ಹೊರಹಾಕಿದ ಅವರು, "ಕರ್ನಾಟಕಕ್ಕೆ ಇದು ದೊಡ್ಡ ಕಳಂಕ. ಈ ರೀತಿ ಘಟನೆ ರಾಜ್ಯ ರಾಜಕೀಯದಲ್ಲಿ ಹಿಂದೆ ನಡೆದಿಲ್ಲ. ಇದರ ವಿರುದ್ಧ ಹೋರಾಟ ಬಗ್ಗೆ ಚರ್ಚೆ ಮಾಡುತ್ತೇವೆ" ಎಂದು ಆಡಳಿತ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.