ನವದೆಹಲಿ, ಆ. 09 (DaijiworldNews/AA): ಪ್ರತಿಯೊಬ್ಬ ವಿದ್ಯಾರ್ಥಿಯೂ ಮಹತ್ವಾಕಾಂಕ್ಷೆ ಹೊಂದಿರುತ್ತಾನೆ. ಅವರ ಆಶಯಗಳನ್ನು ಪೂರೈಸುವ ನಿಟ್ಟಿನಲ್ಲಿ ಅತ್ಯಂತ ಪಾರದರ್ಶಕ ಮತ್ತು ವಿಶ್ವಾಸಾರ್ಹ ಪರೀಕ್ಷಾ ಪರಿಸರ ವ್ಯವಸ್ಥೆ ನಿರ್ಮಿಸುವತ್ತ ಆದ್ಯ ಗಮನ ಹರಿಸಬೇಕಿದೆ ಎಂದು ಕೇಂದ್ರದ ಶಿಕ್ಷಣ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಸೂಚನೆ ನೀಡಿದರು.

ದೆಹಲಿಯಲ್ಲಿ ಉಭಯ ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದ ಅವರು, "ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಗಳು ಎದುರಾಗದಂತೆ ಸ್ಪಂದಿಸುವ ನಿಟ್ಟಿನಲ್ಲಿ ಮುಂದಿನ ಹಂತಗಳ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು. ಪ್ರತಿಯೊಬ್ಬ ವಿದ್ಯಾರ್ಥಿಯೂ ಮಹತ್ವಾಕಾಂಕ್ಷೆ ಹೊಂದಿರುತ್ತಾನೆ. ಅವರ ಆಶಯಗಳನ್ನು ಪೂರೈಸುವ ನಿಟ್ಟಿನಲ್ಲಿ ಅತ್ಯಂತ ಪಾರದರ್ಶಕ ಮತ್ತು ವಿಶ್ವಾಸಾರ್ಹ ಪರೀಕ್ಷಾ ಪರಿಸರ ವ್ಯವಸ್ಥೆ ನಿರ್ಮಿಸುವತ್ತ ಆದ್ಯ ಗಮನ ಹರಿಸಬೇಕಿದೆ" ಎಂದರು.
"ಪ್ರಧಾನಿ ನರೇಂದ್ರ ಮೋದಿ ಅವರ ಅಗತ್ಯ ಮಾರ್ಗದರ್ಶನ, ಸಲಹೆಯಂತೆ ಯಾವ ವಿದ್ಯಾರ್ಥಿಗೂ ಅನ್ಯಾಯವಾಗದಂತೆ ಶೈಕ್ಷಣಿಕ ಸುಧಾರಣಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಲು ಗಮನಹರಿಸಿ" ಎಂದು ಅಧಿಕಾರಿಗಳಿಗೆ ತಿಳಿಸಿದರು.