ದೆಹಲಿ, ಆ. 09 (DaijiworldNews/AA): ಗ್ಲ್ಯಾಸ್ಗೋದಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದು ಮರಳಿದ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭೇಟಿಯಾಗಿ ಅಭಿನಂದಿಸಿದರು.

ಈ ಭೇಟಿಯ ವಿಡಿಯೋ ತುಣುಕನ್ನು ಪ್ರಧಾನಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾರು ಆಡುತ್ತಾರೋ, ಅವರೇ ಗೆಲ್ಲುತ್ತಾರೆ. ಭಾರತವನ್ನು ಸದಾ ಹುರಿದುಂಬಿಸಿ ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತ ಒಟ್ಟು 39 ಪದಕಗಳನ್ನು, ಅದರಲ್ಲೂ 13 ಚಿನ್ನದ ಪದಕಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದೆ. ಭಾರತದ ಬಾಕ್ಸಿಂಗ್ ತಂಡವೂ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಗ್ಲಾಸ್ಗೋ ಗೇಮ್ಸ್ನಲ್ಲಿ ದಾಖಲೆಯ 10 ಪದಕಗಳನ್ನು ಗೆದ್ದಿದೆ.