ಬೆಂಗಳೂರು, ಆ. 11 (DaijiworldNews/AK): ರಾಜ್ಯ ವಿಧಾನಮಂಡಲದ ಸ್ಪೀಕರ್ ಹಾಗೂ ಸಭಾಪತಿ ಸ್ಥಾನಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 14ರಂದು ಎರಡೂ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಸಂಖ್ಯಾಬಲದ ದೃಷ್ಟಿಯಿಂದ ಆಡಳಿತಾರೂಢ ಪಕ್ಷಕ್ಕೆ ಅನುಕೂಲಕರ ಪರಿಸ್ಥಿತಿ ಇರುವುದರಿಂದ, ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ಗಳು ಎರಡೂ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.
ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಅಗತ್ಯ ಸಂಖ್ಯಾಬಲದ ಕೊರತೆ ಇರುವ ಹಿನ್ನೆಲೆ ಸ್ಪೀಕರ್ ಮತ್ತು ಸಭಾಪತಿ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸೋದು ಸಾಧ್ಯತೆ ಇಲ್ಲ. ಹೀಗಾಗಿ ಎರಡೂ ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆಯೇ ಹೆಚ್ಚಾಗಿದೆ.
ಯಾವುದೇ ಕೊನೆಯ ಕ್ಷಣದ ಬದಲಾವಣೆಗಳು ಆಗದಿದ್ದರೆ, ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಜಿ.ಎಸ್. ಪಾಟೀಲ್ ಆಯ್ಕೆಯಾಗಲಿದ್ದಾರೆ. ಇನ್ನು ವಿಧಾನ ಪರಿಷತ್ನ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್ ಆಯ್ಕೆಯಾಗಲಿದ್ದಾರೆ.