ಬೆಂಗಳೂರು, ಆ. 13 (DaijiworldNews/TA): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಯು.ಟಿ. ಖಾದರ್ ಅವರು ಮೊದಲ ದಿನವೇ ಇಲಾಖೆಗೆ ಭೇಟಿ ನೀಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದರು.


ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಪಿಎಫ್ (PF) ಸೇವೆ ಒದಗಿಸದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಉದ್ಯೋಗಿಗಳಿಗೆ PF ಸೌಲಭ್ಯ ನೀಡದ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇಲಾಖೆಯ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಸಿಬ್ಬಂದಿಯ ಸಮಸ್ಯೆಗಳು ಹಾಗೂ ಇಲಾಖೆಯ ಕಾರ್ಯವೈಖರಿ ಕುರಿತು ಚರ್ಚೆ ನಡೆಸಿದರು.