ಇಟಾನಗರ, ಆ. 15 (DaijiworldNews/AA): ಅರುಣಾಚಲ ಪ್ರದೇಶದ ಸುಬನ್ಸಿರಿ ಜಿಲ್ಲೆಯಲ್ಲಿ ಹಠಾತ್ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಈ ಅವಘಡದಲ್ಲಿ ಐವರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

ದಿಢೀರ್ ಪ್ರವಾಹದಿಂದಾಗಿ ದಿಬಾಂಗ್ ಕಣಿವೆಯ ಪಸು ಪಾನಿ ಸೇನಾ ಶಿಬಿರದ ಎರಡು ಆಶ್ರಯ ತಾಣಗಳು ಕೊಚ್ಚಿ ಹೋಗಿವೆ. ಜೊತೆಗೆ ಕಿಯೋಜರಿಂಗ್-ಬೈಚಿಂಗ್ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಹಲವಾರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಇಬ್ಬರೂ ಸೈನಿಕರನ್ನು ರಕ್ಷಿಸಲಾಗಿದ್ದು, ಐವರು ಸೈನಿಕರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.