ಶ್ರೀನಗರ, ಸೆ 16(DaijiworldNews/SM): ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಬಂಧಿಸಲಾಗಿದೆ. ಸಾರ್ವಜನಿಕ ಭದ್ರತಾ ಕಾಯ್ದೆಯಡಿಯಲ್ಲಿ ಅವರನ್ನು ಬಂಧಿಸಲಾಗಿದೆ.
ಫಾರೂಕ್ ಅಬ್ದುಲ್ಲಾ ಹಾಲಿ ಸಂಸದರಾಗಿದ್ದು, ಶ್ರೀನಗರದಲ್ಲಿರುವ ನಿವಾಸದಲ್ಲಿ ಅವರನ್ನು ಬಂಧಿಸಲಾಗಿದೆ. ಅವರ ನಿವಾಸವನ್ನೇ ತಾತ್ಕಾಲಿಕ ಜೈಲಾಗಿ ಪರಿವರ್ತಿಸಲಾಗಿದೆ. ಅಲ್ಲೇ ಅವರನ್ನು ಇರಿಸಲಾಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಫಾರೂಕ್ ಅಬ್ದುಲ್ಲಾ ಅವರ ತಂದೆ ಶೇಖ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿದ್ದಾಗ ಸಾರ್ವಜನಿಕ ಭದ್ರತಾ ಕಾಯ್ದೆಯನ್ನು ಜಾರಿಗೊಳಿಸಲಾಗಿತ್ತು. ಈ ಕಾಯ್ದೆಯಂತೆ, ಬಂಧಿತ ವ್ಯಕ್ತಿಯನ್ನು ಯಾವುದೇ ವಿಚಾರಣೆ ಇಲ್ಲದೆ 2 ವರ್ಷಗಳ ಕಾಲ ಜೈಲಿನಲ್ಲಿಡಲು ಅವಕಾಶವಿದೆ. ಇದೀಗ ತಂದೆ ಜಾರಿಗೆ ತಂದಿರುವ ಕಾನೂನು ಮಗನಿಗೆ ಮಾರಕವಾಗಿದೆ.