ನವದೆಹಲಿ, ಸೆ 17 (Daijiworld News/RD): ಸೌದಿ ಅರೇಬಿಯಾದಲ್ಲಿನ ವಿಶ್ವದ ಅತೀದೊಡ್ಡ ಕಚ್ಚಾ ತೈಲ ಸಂಸ್ಕರಣಾ ಘಟಕದ ಮೇಲೆ ಉಗ್ರರು ಡ್ರೋನ್ ದಾಳಿ ನಡೆಸಿರುವ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಏರಿಕೆಯಾಗುವ ಸಾಧ್ಯತೆಗಳಿವೆ.
ಭಾರತದಲ್ಲಿ ಮುಂದಿನ 15 ದಿನಗಳಲ್ಲಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 5-6ರಷ್ಟು ಏರಿಕೆಯಾಗುವ ಸಾಧ್ಯತೆಗಳಿದ್ದು, ಸೋಮವಾರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಬ್ಯಾರಲ್'ಗೆ 72 ಡಾಲರ್'ಗೆ ತಲುಪಿದ್ದು, ಇದು ಹಿಂದಿನ ದರಕ್ಕಿಂತ ಶೇ.20ರಷ್ಟು ದುಪ್ಪಟ್ಟಾಗಿದೆ.
ಸೌದಿ ಅರೇಬಿಯಾದಲ್ಲಿ ಕಚ್ಚಾತೈಲ ಉತ್ಪಾದನೆ ಕುಂಠಿತಗೊಂಡಿದ್ದರು, ಅದರಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟಪಡಿಸಿದೆ. ಭಾರತ ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದು ಮಾಡುವ ದೇಶವಾಗಿದ್ದು, ಅತಿ ಹೆಚ್ಚು ತೈಲ ಸರಬರಾಜು ಮಾಡುವ ರಾಷ್ಟ್ರಗಳ ಪಟ್ಟಿಯಲ್ಲಿ ಸೌದಿ ಅರೇಬಿಯಾ ಎರಡನೇ ಸ್ಥಾನದಲ್ಲಿದೆ. ಈ ಬಗ್ಗೆ ಸೌದಿ ಸರ್ಕಾರದ ಅರಾಮ್ಕೋ ಅಧಿಕಾರಿಗಳೇ ಭಾರತಕ್ಕೆ ಯಾವುದೇ ಸಮಸ್ಯೆಯಾಗವುದಿಲ್ಲ ಎಂದು ಹೇಳಿದ್ದಾರೆ. ಎಂದು ಮೂಲಗಳು ತಿಳಿಸಿವೆ.