ನವದೆಹಲಿ, ಸೆ 18 (DaijiworldNews/SM): ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಮಾಜಿ ಸಚಿವ ಡಿಕೆ ಶಿವಕುಮಾರ್ ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ. ಅವರಿಗೆ ಜಾಮೀನು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರ ಗುರುವಾರಕ್ಕೆ ಮುಂದೂಡಲಾಗಿದೆ. ದೆಹಲಿಯ ವಿಶೇಷ ಕೋರ್ಟ್ ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.
ಜಾಮೀನು ಕೋರಿ ಡಿಕೆಶಿ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಬುಧವಾರ ನಡೆಸಬೇಕಿತ್ತು. ಆದರೆ, ಇಡಿ ಪರ ವಕೀಲರು ಬುಧವಾರದಂದು ಆಗಮಿಸದ ಹಿನ್ನೆಲೆಯಲ್ಲಿ ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 18ರ ಗುರುವಾರಕ್ಕೆ ಮುಂದೂಡಿದರು.
ಜಾರಿ ನಿರ್ದೇಶನಾಲಯದ ಪರ ಕಿರಿಯ ವಕೀಲರು ಮನವಿ ಮಾಡಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಯಿತು. ಇನ್ನು ಡಿಕೆಶಿ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ. ಹಾಗೂ 7 ಬಾರಿ ಶಾಸಕರಾಗಿರುವ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.