ನವದೆಹಲಿ, ಸೆ 19 (DaijiworldNews/SM): ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ವಿಶೇಷ ಕೋರ್ಟ್ ಶನಿವಾರಕ್ಕೆ ಮುಂದೂಡಿದ್ದು, ಡಿಕೆಶಿ ತಿಹಾರ ಜೈಲಿನಲ್ಲೇ ಉಳಿಯಬೇಕಾಗಿದೆ.
ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು ವಿಚಾರಣೆಯನ್ನು ಶನಿವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ. ಗುರುವಾರ ಮಧ್ಯಾಹ್ನ ಮೂರು ಗಂಟೆಗೆ ಜಾಮೀನು ಅರ್ಜಿ ವಿಚಾರಣೆ ಆರಂಭಗೊಂಡಿತ್ತು. ಇಡಿ ಪರ ವಕೀಲರು ವಾದ ಮಂಡಿಸಿದರು. ಹಾಗೂ ಡಿಕೆಶಿ ಪರ ವಕೀಲರೂ ಕೂಡ ತಮ್ಮ ಅಹವಾಲು ಮಂಡಿಸಿದರು. ವಾದ ಪ್ರತಿವಾದದ ಬಳಿಕ ಕೋರ್ಟ್ ಅರ್ಜಿ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿಕೆ ಮಾಡಿದೆ.
ಈ ಮೂಲಕ ಕನಕಪುರ ಬಂಡೆಗೆ ಜೈಲೇ ಗತಿ ಎಂಬಂತಾಗಿದೆ. ಈಗಾಗಲೇ ಗುರುವಾರದಂದು ಬೆಳಗ್ಗೆ ಡಿಕೆಶಿಯವರನ್ನು ತಿಹಾರ ಜೈಲಿಗೆ ಶಿಪ್ಟ್ ಮಾಡಲಾಗಿದೆ. ಬಂಧನದ ಬಳಿಕ ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಕೆಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರ ಆರೋಗ್ಯ ಸಹಜ ಸ್ಥಿತಿಗೆ ಬಂದಿರುವ ಹಿನ್ನೆಲೆಯಲ್ಲಿ ಇಂದು ಅವರನ್ನು ತಿಹಾರ ಜೈಲಿಗೆ ಶಿಫ್ತ್ ಮಾಡಲಾಗಿದೆ.