ಬೆಂಗಳೂರು,ಸೆ 20(Daijiworld News/RD): ಮೈತ್ರಿ ಸರ್ಕಾರವನ್ನು ಪತನಗೊಳಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಅನರ್ಹ ಶಾಸಕರಿಗೆ ಬಂಪರ್ ಉಡುಗೊರೆಯನ್ನು ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ.
ಅನರ್ಹತೆ ಕುರಿತಾದ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ಇರುವುದರಿಂದ ವಿಚಾರಣೆ ವಿಳಂಬವಾಗುತ್ತಿದ್ದು, ಅನರ್ಹ ಶಾಸಕರನ್ನು ಚಿಂತೆಗೀಡು ಮಾಡಿದೆ. ಇದರ ಬೆನ್ನಲ್ಲೆ ಬಿಎಸ್ ಯಡಿಯೂರಪ್ಪ ಅವರ ಪರ ನಿಂತು ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಎದುರಾಗುವ ಉಪಚುನಾವಣೆಯಲ್ಲಿ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ರಣತಂತ್ರ ರೂಪಿಸಿದ್ದಾರೆ. ಈ ಮೂಲಕ ಶಾಸಕರಿಗೆ ಉಡುಗೊರೆಯನ್ನು ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಉಪಚುನಾವಣೆಗೆ ಈಗಾಗಲೇ ಸಿದ್ಧತೆ ನಡೆಸಿರುವ ಬಿಜೆಪಿ, ಅನರ್ಹ ಶಾಸಕರ ಬಗ್ಗೆ ಪಕ್ಷದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ 17 ಕ್ಷೇತ್ರಗಳ ಮುಖಂಡರ ಜೊತೆ ಯಡಿಯೂರಪ್ಪ ಮಹತ್ವದ ಸಭೆ ನಡೆಸಿ, ಚರ್ಚೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.