ಬೆಳಗಾವಿ, ಸೆ 20(DaijiworldNews/SM): ರಾಜ್ಯದಲ್ಲಿ ಈಗಾಗಲೇ ನೆರೆ ಹಾಗು ಅತಿವೃಷ್ಠಿಯಿಂದ ರೈತರು ಕಂಗಾಲಾಗಿದ್ದಾರೆ. ಬೆಳೆಹಾನಿಯಾಗಿರುವ ರೈತರ ಸಾಲ ವಸೂಲಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಗಾಗಲೇ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ. ರೈತರ ಬೆಳೆ ಸಾಲಮನ್ನಾ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ರೈತರಿಗೆ ಬೃಹತ್ ಕೈಗಾರಿಕಾ ಸಚಿವರು ಭರವಸೆ ನೀಡಿದ್ದಾರೆ.