ನವದೆಹಲಿ, ಸೆ 21 (Daijiworld News/RD): ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾದ 15 ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ.
ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಆರ್ ಆರ್ ನಗರ ಮತ್ತು ಮಸ್ಕಿ ಕ್ಷೇತ್ರಗಳಲ್ಲಿ ಉಪಚುನಾವಣೆ ದಿನಾಂಕ ಘೋಷಿಸಿಲ್ಲ. ಇಂದಿನಿಂದಲೇ ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಅಯೋಗ ತಿಳಿಸಿದೆ.
ಗೋಕಾಕ್, ಅಥಣಿ, ಕಾಗವಾಡ, ಹಿರೆಕೆರೂರು, ಯಲ್ಲಾಪುರ, ಯಶವಂತಪುರ್, ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆಆರ್ ಪೇಟೆ, ಮಹಾಲಕ್ಷ್ಮಿ ಲೇಔಟ್, ಕೆಆರ್ ಪುರ, ರಾಣೇಬೆನ್ನೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.