ಹಜಹಾನ್ ಪುರ್, ಸೆ 25 (Daijiworld News/MSP): ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ್ ವಿರುದ್ಧ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದ ಕಾನೂನು ವಿದ್ಯಾರ್ಥಿನಿಯನ್ನು ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.ಅಲಹಾಬಾದ್ ಹೈಕೋರ್ಟ್ನಿಂದ ಸಂತ್ರಸ್ತ ಯುವತಿಗೆ ನಿರೀಕ್ಷಣಾ ಜಾಮೀನು ತಿರಸ್ಕೃರಿಸಿದ ಮಾರನೇದಿನವೇ ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
ಅತ್ಯಾಚಾರ ಆರೋಪದ ಮೂಲಕ ಕಾನೂನು ವಿದ್ಯಾರ್ಥಿನಿ ತನ್ನ ಸ್ನೇಹಿತರ ಜತೆ ಸೇರಿ ಚಿನ್ಮಯಾನಂದ್ ಅವರಿಂದ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ್ದಾರೆಂಬ ಆರೋಪದ ಮೇಲೆ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆಂದು ಹೇಳಲಾಗುತ್ತಿದೆ.
ಬುಧವಾರ ಬೆಳಗ್ಗೆ 23 ವರ್ಷದ ಕಾನೂನು ವಿದ್ಯಾರ್ಥಿನಿಯನ್ನು ಉತ್ತರಪ್ರದೇಶದ ಮನೆಯಲ್ಲಿ ಆಕೆಯನ್ನು ವಿಶೇಷ ತನಿಖಾ ತಂಡ ಬಂಧಿಸಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ ಎಂದು ಎಂದು ತಿಳಿದುಬಂದಿದೆ.
ಸ್ವಾಮಿ ಚಿನ್ಮಯಾನಂದ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ಕಾನೂನು ವಿದ್ಯಾರ್ಥಿನಿ ದೂರು ಆಧರಿಸಿ ಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈ ನಡುವೆ ಚಿನ್ಮಯಾನಂದ್ ಅವರ ಜಾಮೀನು ಅರ್ಜಿಯನ್ನು ಶಹಜಹಾನಪುರ ಚೀಫ್ ಜ್ಯೂಡಿಷಿಯಲ್ ಮ್ಯಾಜಿಸ್ಪ್ರೇಟ್ ಕೋರ್ಟ್ ತಿರಸ್ಕರಿಸಿದೆ.