ಬೆಂಗಳೂರು, ಸೆ.25(Daijiworld News/SS): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.
ಕಳೆದ ಎರಡು ದಿನಗಳಿಂದ ಕೊಪ್ಪಳ, ತುಮಕೂರು, ಬೆಂಗಳೂರು, ಮಂಡ್ಯ, ಬಳ್ಳಾರಿ, ಕಲಬುರಗಿ ಸೇರಿದಂತೆ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗಿದೆ. ಬೆಂಗಳೂರು, ಕಲಬುರಗಿಯಲ್ಲಿ ಕೂಡ ಮಳೆಯಾಗುತ್ತಿದೆ. ಮುಂದಿನ ಎರಡು ದಿನ ರಾಜ್ಯಾದ್ಯಂತ ಭಾರಿ ಮಳೆ ನಿರೀಕ್ಷೆ ಇದ್ದು, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಸೆ. 25 ರಿಂದ 26ರಂದು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ 65 ರಿಂದ 115 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.