ನವದೆಹಲಿ, ಸೆ 25 (DaijiworldNews/SM): ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತಿಹಾರ ಜೈಲಿನಲ್ಲಿರುವ ಕನಕಪುರ ಬಂಡೆ ಡಿಕೆಶಿ ಗ್ರಹಚಾರ ಯಾಕೆ ಸರಿಯಾದಂತೆ ಕಾಣುತ್ತಿಲ್ಲ. ಮತ್ತೆ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಲು ದೆಹಲಿ ವಿಶೇಷ ಕೋರ್ಟ್ ಬುಧವಾರ ನಿರಾಕರಿಸಿದೆ. ಡಿಕೆ ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ರೋಸ್ ಅವೆನ್ಯೂ ನ್ಯಾಯಾಲಯ, ತೀರ್ಪು ಕಾಯ್ದಿರಿಸಿತ್ತು. ಇಂದು ಸಂಜೆ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಗಮನಾರ್ಹ ವಿಚಾರವೆಂದರೆ, ನ್ಯಾಯಾಧೀಶರು ಕೇವಲ ಒಂದೇ ವಾಕ್ಯದಲ್ಲಿ ತೀರ್ಪು ಓದಿ ಪೀಠದಿಂದ ತೆರಳಿದರು.
ಜಾಮೀನು ವಜಾಗೊಂಡ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಕಾನೂನು ಸಮರ ಮುಂದುವರೆಸಲಿದೆ. ದೆಹಲಿ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಅವರು ತಿಹಾರ್ ಜೈಲಿನಲ್ಲೇ ಇರಬೇಕಾದ ಅನಿವಾರ್ಯತೆ ಇದೆ.