ನವದೆಹಲಿ, ಸೆ 26 (Daijiworld News/RD): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದತಿಯ ವಿರುದ್ಧ ಆಕ್ರೋಶಗೊಂಡಿರುವ ಪಾಕಿಸ್ತಾನ, ಭಾರೀ ವಿಧ್ವಸಂಕ ಕೃತ್ಯ ಎಸಗಲು ಸಂಚು ರೂಪಿಸಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲು ಹೊಂಚು ಹಾಕಿದೆ ಎಂದು ವರದಿಗಳು ತಿಳಿಸಿವೆ.
ಉಗ್ರರ ದಾಳಿಯ ಬಗ್ಗೆ ರಾಷ್ಟ್ರೀಯ ವಿಮಾನಯಾನ ಭದ್ರತಾ ವಿಭಾಗಕ್ಕೆ ಅನಾಮಿಕ ಪತ್ರ ಬಂದಿದ್ದು, ಇದರಲ್ಲಿ ಉಲ್ಲೇಖಿಸಲಾಗಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದು, ಅಷ್ಟೇ ಅಲ್ಲದೆ 370ನೇ ವಿಧಿ ರದ್ಧತಿಗೆ ಉಗ್ರರು ಪ್ರತಿಕಾರ ತೀರಿಸಿಕೊಳ್ಳುವುದಾಗಿ ಎಂದು ಆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಮೋದಿ, ಶಾ ಹಾಗೂ ದೋವಲ್ ಅವರು ಜೈಷ್ ಉಗ್ರರ ಸಂಘಟನೆಯ ಟಾರ್ಗೆಟ್.
ರಾಷ್ಟ್ರೀಯ ವಿಮಾನಯಾನ ಭದ್ರತಾ ವಿಭಾಗಕ್ಕೆ ಸಿಕ್ಕಿರುವ ಪತ್ರದಲ್ಲಿ, ಜೈಷ್-ಇ-ಮೊಹ್ಮದ್ ಸಂಘಟನೆ ಉಗ್ರರು ದೇಶದ 30 ನಗರಗಳ ಮೇಲೆ ದಾಳಿ ನಡೆಸಲು ಹೊಂಚು ಹಾಕಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇದೆ. ಹಾಗಾಗಿ ಪಠಾಣ್ಕೋಟ್, ಅಮೃತ್ಸರ್, ಜೈಪುರ, ಗಾಂಧಿನಗರ, ಲಕ್ನೋ, ಕಾನ್ಪುರ ಸೇರಿದಂತೆ ಜಮ್ಮುಲ್ಲೂ ದಾಳಿ ನಡೆಸಲು ಸ್ಕೆಚ್ ಹಾಕಿದ್ದಾರೆ. ಜೊತೆಗೆ ದೇಶದ 4 ವಿಮಾನ ನಿಲ್ದಾಣಗಳ ಮೇಲೂ ದಾಳಿ ನಡೆಸಲು ಪ್ಲಾನ್ ಮಾಡಿದ್ದಾರೆ ಎನ್ನುವ ಬಗ್ಗೆ ಪತ್ರದಲ್ಲಿ ಮಾಹಿತಿಯಿದೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಹಾಗೂ ಉತ್ತರಪ್ರದೇಶದಲ್ಲಿರುವ ವಾಯುನೆಲೆಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಿದ್ದಾರೆ.