ಬೆಂಗಳೂರು, ಸೆ 27 (Daijiworld News/RD): ರಾಜ್ಯದ 25 ಸಂಸದರಿಗೆ ಪ್ರಧಾನಿ ಮಂತ್ರಿಯ ಜೊತೆ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇರವಾಗಿ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ’ಮಾನ್ಯ ಬಿ.ಎಸ್.ಯಡಿಯೂರಪ್ಪನವರೇ ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಮಂತ್ರಿಗಳ ಜೊತೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ. ಸರ್ವ ಪಕ್ಷ ನಿಯೋಗದ ಜೊತೆ ಪ್ರಧಾನಿಗಳನ್ನು ಭೇಟಿ ಮಾಡೋಣ'. ಉತ್ತರ ಕರ್ನಾಟಕ ಭಾರತಲ್ಲಿಯೇ ಬರುತ್ತದೆ ಎಂದು ಹೇಳಿ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.
ಪ್ರವಾಹದಿಂದ ರಾಜ್ಯದಲ್ಲಿ ಅದೆಷ್ಟೋ ಹಾನಿ ಸಂಭವಿಸಿದ್ದು, ಇನ್ನೂ ಸಂತೃಸ್ತರಿಗೆ ಸಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಒಂದು ರೂಪಾಯಿ ಪರಿಹಾರವೂ ಕೊಟ್ಟಿಲ್ಲ, ಇಲ್ಲಿಗೆ ಬಂದು ಏನು ಮಾಡುತ್ತೀರಿ, ಯಡಿಯೂರಪ್ಪನವರೇ ನೀವು ಇಲ್ಲಿಗೆ ಬರಬೇಡಿ ಎಂದು ರಾಯಚೂರು ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ, ಇನ್ನು ಸಿಂಧನೂರು ತಾಲೂಕಿನ ಸಾಲಗುಂದದ ಗ್ರಾಮಸ್ಥರು ಮುಖ್ಯಮಂತ್ರಿಯವರೇ ಯಡಿಯೂರಪ್ಪನವರೇ ನೀವಿಲ್ಲಿಗೆ ಬರಬೇಡಿ. ನಾವಿನ್ನೂ ಸತ್ತಿಲ್ಲ, ಬದುಕಿದ್ದೇವೆ. ಮನೆಯಲ್ಲಿ ಅಕ್ಕಿ, ಜೋಳ ಇವೆ ಖರ್ಚಿಗೆ 500ರೂ. ಇದೆ. ಇನ್ನೂ ನಾಲ್ಕು ದಿನ ಮಳೆ ಬಂದರೂ ನಮಗೆ ಏನೂ ಆಗುವುದಿಲ್ಲ ತಲೆಕೆಡಿಸಿಕೊಳ್ಳಬೇಡಿ. ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದೀರಿ ಅಧಿಕಾರ ನಡೆಸಿ, ಇಲ್ಲಿಗೆ ಬರಲು ಹೋಗಬೇಡಿ, ನಾವು ಹೇಗಾದರೂ ಹಾಳಾಗಿ ಹೋಗಲಿ, ನೀವು ಮಾತ್ರ ಇಲ್ಲಿಗೆ ಬರಬೇಡಿ ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.