ಶ್ರೀನಗರ, ಸೆ 28 (Daijiworld News/MSP): ಭಾರತೀಯ ಸೇನಾ ಯೋಧರು, ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಬಳಿ ಇರುವ ಗಂದೇರ್ ಬಾಲ್ ಜಿಲ್ಲೆಯ ನರನಾಗ್ ಬಳಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದು ಇನ್ನು ಮೂವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಇದಕ್ಕೂ ಮುನ್ನ ಉಗ್ರರು ಭಾರತೀಯ ಸೈನಿಕರ ವೇಷ ಧರಿಸಿ ಬಸ್ಸೊಂದನ್ನು ಹೈಜಾಕ್ ಮಾಡಲು ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. 2–3 ಉಗ್ರರು ಜಮ್ಮು–ಶ್ರೀನಗರ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕ ಬಸ್ಸೊಂದನ್ನು ನಿಲ್ಲಿಸಲು ಯತ್ನಿಸಿದ್ದಾರೆ. ಆದರೇ ಸಂಶಯ ಬಂದ ಚಾಲಕ ವೇಗವಾಗಿ ಬಸ್ಸನ್ನು ಚಲಾಯಿಸಿ ಪ್ರಯಾಣಿಕರನ್ನು ರಕ್ಷಿಸಿದ್ದು, ಆ ಬಳಿಕ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.
ಈ ಉಗ್ರರು ಭಾರತೀಯ ಸೇನೆಯ ಯೋಧರ ಸಮವಸ್ತ್ರ ಧರಿಸಿದ್ದರೆಂದೂ ಚಾಲಕ ತಿಳಿಸಿದ್ದಾರೆ. ಕೂಡಲೇ ಭಾರತೀಯ ಸೇನೆಯ ಯೋಧರು ಉಗ್ರರ ವಿರುದ್ಧ ಗುಂಡಿನ ದಾಳಿ ನಡೆಸಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ದೊರಕಿದೆ.