ನವದೆಹಲಿ, ಸೆ.29(Daijiworld News/SS): ಕೂಡಲೇ ಜಾರಿಗೆ ಬರುವಂತೆ ಎಲ್ಲಾ ರೀತಿಯ ಈರುಳ್ಳಿ ರಪ್ತುನ್ನು ನಿಷೇಧಿಸಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಆದೇಶ ಹೊರಡಿಸಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಈರುಳ್ಳಿ ರಪ್ತುನ್ನು ನಿಷೇಧಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. ಈ ಬಾರಿ ಮಳೆ ಹಾಗೂ ಬೆಲೆ ಏರಿಕೆ ಪರಿಣಾಮ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಹಾಗಾಗೀ ಸರ್ಕಾರ ಈ ಕ್ರಮ ಕೈಗೊಂಡಿದೆ.
ಉತ್ತಮವಾಗಿ ದೇಶಾದ್ಯಂತ ಈರುಳ್ಳಿ ಬೆಳೆಯಲಾಗಿದೆ. ಆದರೆ, ಈ ಬಾರಿ ಅತಿವೃಷ್ಟಿಯಿಂದಾಗಿ ಶೇ, 50 ರಷ್ಟು ಈರುಳ್ಳಿ ಬೆಳೆ ನಾಶವಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯಿಂದ ಈರುಳ್ಳಿ ಆಮದಿಗೂ ಹೊಡೆತ ಬಿದ್ದಿದ್ದು, ಈರುಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ.