ನವದೆಹಲಿ, ಸೆ 30 (DaijiworldNews/SM): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಹೈಕೋರ್ಟ್ ಮೆಟ್ಟಿಲೇರಿರುವ ಡಿಕೆಶಿಗೆ ಅಲ್ಲೂ ಕೂಡ ಹಿನ್ನಡೆಯುಂಟಾಗಿದೆ.
ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಒಳಗಾಗಿ ಬಂಧನದಲ್ಲಿರುವ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ. ಬಂಧನದಿಂದ ಬಿಡುಗಡೆಗೊಳ್ಳಬೇಕೆಂಬ ಆಸೆಯಿಂದ ಡಿಕೆಶಿ ಪರ ವಕೀಲರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ಸೋಮವಾರ ವಿಚಾರಣೆಗೆ ಒಳಪಡಿಸಿದ ನ್ಯಾ. ಸುರೇಶ್ ಕುಮಾರ್ ಅವರ ಏಕಸದಸ್ಯ ಪೀಠವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಈ ಹಿನ್ನೆಲೆಯಲ್ಲಿ ಅ.14ರ ತನಕ ಡಿಕೆಶಿಗೆ ತಿಹಾರ ಜೈಲೆ ಗತಿಯಾಗಲಿದೆ.