ಬೆಂಗಳೂರು, ಅ.01(Daijiworld News/SS): ಚುನಾವಣಾ ಆಯೋಗ ಕೂಡಲೇ ಮಾದರಿ ನೀತಿ ಸಂಹಿತೆಯನ್ನು ಜಾರಿಗೆ ತರಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಮಾದರಿ ನೀತಿ ಸಂಹಿತೆ ಜಾರಿಗೆ ತರುವಲ್ಲಿ ಆಯೋಗ ವಿಫಲವಾದರೇ ರಾಜ್ಯದ್ಯಾಂತ ಉಗ್ರ ಪ್ರತಿಭಟನೆ ಕೈಗೊಳ್ಳುವುದಾಗಿ ಕಾಂಗ್ರೆಸ್ ಎಚ್ಚರಿಕೆ ನೀಡಿದೆ. ಮಾತ್ರವಲ್ಲ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಂಸದ ನಾಸೀರ್ ಹುಸೇನ್ ಈ ಸಂಬಂಧ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.
ಮಾದರಿ ನೀತಿ ಸಂಹಿತೆ ಜಾರಿ ಮಾಡದೇ ಡಿಸೆಂಬರ್ ತಿಂಗಳಿನಲ್ಲಿ ನೀವು ಹೇಗೆ ಉಪಚುನಾವಣೆಯನ್ನು ನಡೆಸುತ್ತೀರಾ ಎಂದು ಪ್ರಶ್ನಿಸಿರುವ ದಿನೇಶ್ ಗುಂಡೂರಾವ್, ನಮಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.
ಮಾತ್ರವಲ್ಲ ಮಾಜಿ ಸಂಸದ ವಿಎಸ್ ಉಗ್ರಪ್ಪ ಕೂಡ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗದ ಆದೇಶ ಪಾರದರ್ಶಕವಾಗಿಲ್ಲ ಎಂದು ತಿಳಿಸಿದ್ದಾರೆ,