ಔರಂಗಾಬಾದ್, ಅ 3 (Daijiworld News/RD): ಮಹಾತ್ಮ ಗಾಂಧೀಜಿಯವರನ್ನು ನಾಥುರಾಮ್ ಗೋಡ್ಸೆ ಒಮ್ಮೆ ಹತ್ಯೆ ಮಾಡಿದರೆ, ಆಧುನಿಕ ಗೋಡ್ಸೆಗಳು ಗಾಂಧೀಯವರ ಹಿಂದೂಸ್ತಾನವನ್ನು ಪ್ರತೀನಿತ್ಯ ಕೊಲ್ಲುತ್ತಿದ್ದಾರೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಗಾಂಧೀಜಿ ಹೆಸರಿನಲ್ಲಿ ಭಿನ್ನ ಚಿಂತನೆಗಳನ್ನು ವ್ಯಕ್ತಪಡಿಸುವ ಮೂಲಕ ದೇಶವನ್ನೇ ಮರಳು ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಗೋಡ್ಸೆಯನ್ನು ತಮ್ಮ ನಾಯಕನೆಂದು ಪರಿಗಣಿಸುತ್ತಾರೆ. ಅವರು ಗಾಂಧೀಜಿ ಬಗ್ಗೆ ಮಾತನಾಡುತ್ತಾರೆ. ಆದರೆ ಅವರ ಮನಸ್ಸಿನಲ್ಲಿ ನಾಥೂರಾಮ್ ಗೋಡ್ಸೆಯ ಆಲೋಚನೆಗಳೇ ಹೆಚ್ಚಾಗಿದೆ ಎಂದು ಗುಡುಗಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಅವರು, ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಭಾರತದಲ್ಲೆಡೆ ಎನ್ಆರ್ ಸಿ ಮಾಡುತ್ತೇವೆಂದು ಹೇಳುತ್ತಿದ್ದಾರೆ. ಭಾರತದಲ್ಲಿ ಸಂವಿಧಾನವಿದೆ ಎಂಬುದನ್ನು ಅವರು ಮರೆತಿದ್ದಾರೆ ಎಂದು ಹೇಳವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.